ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ಆರಂಭ| ನಿರೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆ| ಹರಿಯಾಣದಲ್ಲಿಆಡಳಿತಾರೂಢ ಬಿಜೆಪಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲ| ಹರಿಯಾಣದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕಾಂಗ್ರೆಸ್ ಹಾಗೂ ಜೆಜೆಪಿ| ಹರಿಯಾಣದಲ್ಲಿ ಕಾಂಗ್ರೆಸ್-ಜೆಜೆಪಿ ಮೈತ್ರಿ ಸಾಧ್ಯತೆ| ಸಿಎಂ ಪಟ್ಟ ಕೊಡುವವರಿಗೆ ಬೆಂಬಲ ಎಂದು ಘೋಷಿಸಿದ ದುಷ್ಯಂತ್ ಚೌಟಾಲಾ|

ಚಂಡೀಘಡ್(ಅ.24): ತೀವ್ರ ಕುತೂಹಲ ಮೂಡಿಸಿರುವ ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಹರಿಯಾಣದಲ್ಲಿ ಮಾತ್ರ ಆಡಳಿತಾರೂಢ ಬಿಜೆಪಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದಂತಿದೆ.

ಹರಿಯಾಣ, ಮಹಾರಾಷ್ಟ್ರ ಸದ್ಯದ ಬಲಾಬಲ: ಇದು ಚುನಾವಣಾ ರಣರಂಗದ ಕುತೂಹಲ!

ಒಟ್ಟು 90 ಸೀಟುಗಳ ಹರಿಯಾಣ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ, ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅದರಂತೆ ಕಾಂಗ್ರೆಸ್ 30ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Scroll to load tweet…

ಈ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಈಗಾಗಲೇ ಮೈತ್ರಿ ಮಾತುಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್-ಜೆಜೆಪಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್ ದುಷ್ಯಂತ್ ಚೌಟಾಲಾ ಅವರನ್ನು ಭೇಟಿ ಮಾಡಿ ಮೊದಲ ಸುತ್ತಿನ ಮಾತುಕತೆ ನಡೆಸಿದೆ. 

ಶಿವಸೇನೆ'ಮಹಾ'ಬೇಡಿಕೆ: ಸಾಧ್ಯನಾ ಆದಿತ್ಯ ಠಾಕ್ರೆ ಸಿಎಂ ಆಗೋಕೆ?

ಆದರೆ ತಮಗೆ ಸಿಎಂ ಪಟ್ಟ ಕೊಡುವ ಪಕ್ಷಕ್ಕೆ ಬೆಂಬಲ ನೀಡುವುದಾಗಿ ದುಷ್ಯಂತ್ ಚೌಟಾಲಾ ಘೋಷಿಸಿದ್ದಾರೆ. ಯಾವ ಪಕ್ಷ ತಮಗೆ ಸಿಎಂ ಸ್ಥಾನ ಕೊಡುವುದೋ ಆ ಪಕ್ಷಕ್ಕೆ ಸರ್ಕಾರ ರಚನೆಯಲ್ಲಿ ಸಹಾಯ ಮಾಡುವುದಾಗಿ ಚೌಟಾಲಾ ಸ್ಪಷ್ಟಪಡಿಸಿದ್ದಾರೆ.

Scroll to load tweet…

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳನ್ನು ಹರಿಯಾಣದ ಜನತೆ ತಿರಸ್ಕರಿಸಿದ್ದು, ಯಾರು ಸಿಎಂ ಸ್ಥಾನದ ಆಫರ್ ನೀಡುತ್ತಾರೋ ಅವರಿಗೆ ಬೆಂಬಲ ನೀಡುವುದಾಗಿ ಚೌಟಾಲಾ ತಿಳಿಸಿದ್ದಾರೆ. 

Scroll to load tweet…

ದುಷ್ಯಂತ್ ಚೌಟಾಲಾ ಅವರ ಈ ಘೋಷಣೆಯಿಂದ ಬಿಜೆಪಿಯಲ್ಲೂ ಮತ್ತೆ ಅಧಿಕಾರಕ್ಕೇರುವ ಆಸೆ ಮೊಳಕೆಯೊಡೆದಿದ್ದು, ಶೀಘ್ರದಲ್ಲೇ ಹೈಕಮಾಂಡ್ ಹರಿಯಾಣದಲ್ಲಿ ಸರ್ಕಾರ ರಚನೆಯ ಅಖಾಡಕ್ಕೆ ಇಳಿಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ದುಷ್ಯಂತ್: ದೋಸ್ತಿ ಬಯಸಿದೆ ಕಾಂಗ್ರೆಸ್!