ಬೆಂಗಳೂರು[ಜೂ.24]: ಗೌಡ ಎಂಬ ಪದದಿಂದ ನಾನು ಮುಖ್ಯಮಂತ್ರಿ, ಕೇಂದ್ರ ಸಚಿವನಾದೆ ಎಂಬ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ನನ್ನ ಪಕ್ಷ ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಎನ್ನುವ ಮಾತನ್ನು ನಾನು ಹೆಮ್ಮೆಯಿಂದ ಹೇಳಿಕೊಂಡದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ ಎಂದಿದ್ದಾರೆ.
ನನ್ನ ಹೆಸರಲ್ಲಿ ಗೌಡ ಇದ್ದ ಕಾರಣ ಸಿಎಂ, ಕೇಂದ್ರ ಸಚಿವ ಆದೆ: ಡಿವಿಎಸ್‌

ಇಷ್ಟೇ ಅಲ್ಲದೇ ಚುನಾವಣೆಗಳನ್ನು ಗೆಲ್ಲಲು ಜಾತ್ಯತೀತವಾಗಿ, ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿ ಅವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು, ಗೌರವಿಸುವುದು ಮೋದಿ ಅವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.