ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ನಗರದ ಹೆಬ್ಬಾಳದ ಸಿಎಂಎಸ್‌ ಆಸ್ಟರ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದಾರೆ. ಸಣ್ಣ ಶಸ್ತ್ರ ಚಿಕಿತ್ಸೆ ನಿಮಿತ್ತ ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬೆಂಗಳೂರು : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ನಗರದ ಹೆಬ್ಬಾಳದ ಸಿಎಂಎಸ್‌ ಆಸ್ಟರ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದಾರೆ. ಸಣ್ಣ ಶಸ್ತ್ರ ಚಿಕಿತ್ಸೆ ನಿಮಿತ್ತ ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಶಸ್ತ್ರಚಿಕಿತ್ಸೆ ಬಳಿಕ ಎರಡು ದಿನಗಳ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದು ಕೊಳ್ಳಲಿದ್ದಾರೆ. ನಂತರ ಮನೆಗೆ ಹಿಂತಿರುಗಲಿದ್ದಾರೆ. ಮನೆಯಲ್ಲಿ ಸುಮಾರು ಒಂದು ವಾರ ಕಾಲ ವಿಶ್ರಾಂತಿ ಪಡೆದು ಕೊಳ್ಳಬೇಕಾಗಿದ್ದು, ನಂತರ ಎಂದಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಇದರಿಂದ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.