ಮಡಿಕೇರಿ (ಸೆ.29): ರಾಜ್ಯಾದ್ಯಂತ ರಾಜಕೀಯವಾಗಿ ಹಾಗೂ ಸಾರ್ವಜನಿಕವಾಗಿ ತೀವ್ರ ವಿವಾದಕ್ಕೊಳಗಾಗಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ನೆಹಾಲ್ ಒಪ್ಪಿಗೆ ಸೂಚಿಸುವ ಮೂಲಕ ಪ್ರಕರಣ ಮುಕ್ತಾಯ ಕಂಡಂತಾಗಿದೆ.

ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಇಂದು ಕೋರ್ಟ್ ಗೆ ಹಾಜರಾಗಿ ತಮ್ಮ ಅಭಿಪ್ರಾಯ ತಿಳಿಸಿದರು. ಸೆಪ್ಟೆಂಬರ್ 17ರಂದು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ಅಧಿಕಾರಿಗಳು ಮಡಿಕೇರಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು.

 ಮುಂದಿನ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಲಾಗಿದ್ದು, ಕುಟುಂಬಸ್ಥರು ಮಾತ್ರ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.