ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ ವಿಧಿವಶರಾಗಿದ್ದಾರೆ.
ನವದೆಹಲಿ(ಫೆ.01): ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ ವಿಧಿವಶರಾಗಿದ್ದಾರೆ.
ನಿನ್ನೆ ಅಧಿವೇಶನದಲ್ಲಿ ನಡೆದ ರಾಷ್ಟ್ರಪತಿ ಭಾಷಣದ ವೇಳೆ ಅನಾರೋಗ್ಯದಿಂದ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಸುಮಾರು 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಇ. ಅಹ್ಮದ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದಿನ ಬಜೆಟ್ ಮುಂದೂಡುವ ಸಾಧ್ಯತೆಗಳಿವೆ. ಈ ಕುರಿತಾಗಿ ಸ್ಪೀಕರ್ರ ಸುಮಿತ್ರಾ ಮಹಾಜನ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
