ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಈಗಾಗಲೇ ಉತ್ತರಾಖಂಡಕ್ಕೆ ರವಾನಿಸಲಾಗಿದೆಯೆಂದು ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿ (ಫೆ.07): ಈ ಹಿಂದೆ ನೆರೆಯಿಂದ ತತ್ತರಿಸಿದ್ದ ಉತ್ತರಾಖಂಡ ರಾಜ್ಯದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪನದ 6ರಷ್ಟಿದ್ದು ದೆಹಲಿ ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ.
ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಈಗಾಗಲೇ ಉತ್ತರಾಖಂಡಕ್ಕೆ ರವಾನಿಸಲಾಗಿದೆಯೆಂದು ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪ್ರಧಾನಿ ಕಾರ್ಯಾಲಯವೂ ಕೂಡಾ ಉತ್ತರಾಖಂಡದ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯವಾದ ನೆರವನ್ನು ಒದಗಿಸಲು ಸಿದ್ದವಾಗಿದೆಯೆಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಯಾವುದೇ ಸಾವು ನೋವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.