ಮಾರ್ಚ್ 9ರಿಂದ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಅವರು 10 ಮತ್ತು 12ನೇ ತರಗತಿ ಪರೀಕ್ಷೆಯ ಕುರಿತು ಮಾತನಾಡಲಿದ್ದಾರೆ.

ನವದೆಹಲಿ(ಜ.28): ಭಾನುವಾರ ಪ್ರಸಾರವಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿನ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಸಮ್ಮತಿ ಸೂಚಿಸಿದೆ.

ಉತ್ತರ ಪ್ರದೇಶ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಫೆ. 4ರಿಂದ ಮಾ. 8ರವರೆಗೆ ನಡೆಯಲಿರುವ ಚುನಾವಣೆ ಹಿನ್ನೆಲೆ ಚುನಾವಣಾ ನೀತಿ ಸಂಹಿತೆಗೆ ಧಕ್ಕೆಯಾಗದಂತೆ ಎಂದಿನಂತೆ ಕಾರ್ಯಕ್ರಮ ನಡೆಸಲು ಸರ್ಕಾರ ಚುನಾವಣಾ ಆಯೋಗದ ಬಳಿ ಮನವಿ ಮಾಡಿತ್ತು.

ಇದೀಗ ಆಯೋಗ ಸರ್ಕಾರದ ಮನವಿಯನ್ನು ಪುರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 9ರಿಂದ ಎಸ್ಎಸ್ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಅವರು 10 ಮತ್ತು 12ನೇ ತರಗತಿ ಪರೀಕ್ಷೆಯ ಕುರಿತು ಮಾತನಾಡಲಿದ್ದಾರೆ.