ಸಾಮಾಜಿಕ ಜಾಲತಾಣಗಳು ಹಾಗೂ ಜಾಹೀರಾತು ಫಲಕಗಳಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ವೆಬ್‌ಸೈಟ್‌ಗಳು, ಬ್ಲಾಗ್‌ಗಳು,ಸಾಮಾಜಿಕ ಜಾಲತಾಣಗಳು ಹಾಗೂ ಜಾಹೀರಾತು ಫಲಕಗಳಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಮುಖ್ಯಚುನಾವಣಾಧಿಕಾರಿಗಳ ಸೂಚನೆ ಮೇರೆಗೆ ಈ ಪತ್ರ ಬರೆದಿದ್ದಾರೆ