. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ಜ.28ರವರೆಗೂ ತಡೆಯಾಗುವ ಸಾಧ್ಯತೆಯಿದೆ.

ಬೆಂಗಳೂರು(ಜ.23): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮುಕ್ತಾಯದ ತನಕ ವರ್ಗಾವಣೆ ಬೇಡ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ಜ.28ರವರೆಗೂ ತಡೆಯಾಗುವ ಸಾಧ್ಯತೆಯಿದೆ. ರೋಹಿಣಿ ಸೇರಿದಂತೆ ರಾಮನಗರ, ಹಾವೇರಿ, ಹಾಸನ ಜಿಲ್ಲಾಧಿಕಾರಿಗಳ ವರ್ಗಾವಣೆಗಳು ತಾತ್ಕಾಲಿಕವಾಗಿ ತಡೆಯಾಗಲಿದೆ.