ನವದೆಹಲಿ, (ಅ.01): ಕರ್ನಾಟಕ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

"

 ಅವರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ವಿಶೇಷ ಕೋರ್ಟ್​ ವಿಸ್ತರಿಸಿದೆ. ಅಲ್ಲದೆ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ನಿಗದಿಪಡಿಸಿದೆ. ಹೀಗಾಗಿ ಡಿಕೆಶಿ ಅಕ್ಟೋಬರ್ 15ರವರೆಗೆ ತಿಹಾರ್​ ಜೈಲಿನಲ್ಲೇ ಇರಬೇಕಾಗಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮತ್ತೆ 14 ದಿನ ಡಿಕೆಶಿಗೆ ಜೈಲೇ ಗತಿ..!

ಇಂದು (ಮಂಗಳವಾರ) ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್​ಕುಮಾರ್ ಕುಹರ್​ ಅವರು ಡಿ.ಕೆ.ಶಿವಕುಮಾರ್​ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದರು.

ಇಡಿ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿರುವುದನ್ನು ಇಲ್ಲಿ ಸ್ಮರಿಸಬಹದು.

ಅಕ್ಟೋಬರ್ 01ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;