ಏರ್ ಸೆಲ್- ಮ್ಯಾಕ್ಸಿಸ್ ಪ್ರಕರಣದಿಂದ ಮಾರನ್ ಸಹೋದರರಿಗೆ ವಿಶೇಷ ನ್ಯಾಯಾಲಯ ರಿಲೀಫ್ ಕೊಟ್ಟಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ನವದೆಹಲಿ (ಫೆ.03): ಏರ್ ಸೆಲ್- ಮ್ಯಾಕ್ಸಿಸ್ ಪ್ರಕರಣದಿಂದ ಮಾರನ್ ಸಹೋದರರಿಗೆ ವಿಶೇಷ ನ್ಯಾಯಾಲಯ ರಿಲೀಫ್ ಕೊಟ್ಟಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಈ ಪ್ರಕರಣದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಆದೇಶವನ್ನು ನೀಡಬೇಡಿ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಗೆ ಕೇಳಿಕೊಂಡಿದೆ. ನ್ಯಾಯಾಲಯವು ಇದರ ವಿಚಾರಣೆಯನ್ನು ಫೆ. 08 ರಂದು ಕೈಗೆತ್ತಿಕೊಳ್ಳಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದ ಮಾರನ್ ಸಹೋದರರು ಸೇರಿದಂತೆ ಪ್ರಮುಖ ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿತ್ತು.
