ನವದೆಹಲಿ(ಸೆ.18)  ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ(ಸೆ. 19)ಗೆ ಮುಂದೂಡಲಾಗಿದೆ. ಬುಧವಾರ ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ಇಡಿ ವಕೀಲರು ಗೈರಾದ ಕಾರಣ ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.

"

ಡಿಕೆ ಶಿವಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಾಮೀನು  ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದು, ಡಿ.ಕೆ.ಶಿವಕುಮಾರ್​ ಅವರು ಆಸ್ಪತ್ರೆಯಲ್ಲಿ ಇರಲಿದ್ದಾರೋ ಅಥವಾ ತಿಹಾರ್ ಜೈಲಿಗೆ ಹೋಗಲಿದ್ದಾರೋ ಎನ್ನುವುದು ಸ್ಪಷ್ಟವಾಗಿಲ್ಲ. ಆರೋಗ್ಯ ಸ್ಥಿತಿ ಆಧರಿಸಿ  ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನು ಸಂಘ್ವಿ  ವಾದ  ಮಂಡಿಸಿದರೆ, ಇಡಿ ಪರ ನಟರಾಜನ್ ಬೇರೆ ಪ್ರಕರಣದಲ್ಲಿ ಬ್ಯುಸಿ ಇದ್ದ ಕಾರಣ ಹಾಜರಾಗಿರಲಿಲ್ಲ.