ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಟೀಕೆ| ಪತ್ರಕರ್ತನನ್ನು ಬಂಧಿಸಿದ ಯುಪಿ ಪೊಲೀಸರು| ಯುಪಿ ಸರ್ಕಾರದ ನಿಲುವು ಖಂಡಿಸಿದ ಭಾರತೀಯ ಸಂಪಾದಕರ ಒಕ್ಕೂಟ| ‘ಪತ್ರಕರ್ತನ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ’|ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಭಾರತೀಯ ಸಂಪಾದಕರ ಒಕ್ಕೂಟ|

ನವದೆಹಲಿ(ಜೂ.09): ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ಕುರಿತು ಆಕ್ಷೇಪಾರ್ಹ ಟೀಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತನ ಬಂಧಿಸಿರುವ ಕ್ರಮವನ್ನು ಭಾರತೀಯ ಸಂಪಾದಕರ ಒಕ್ಕೂಟ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಸಂಪಾದಕರ ಒಕ್ಕೂಟ, ಪತ್ರಕರ್ತನ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಗೊಳಿಸುವ ಪ್ರಯತ್ನ ಎಂದು ಕಿಡಿಕಾರಿದೆ.

Scroll to load tweet…

ಟೀಕೆಗೆ ಪ್ರತಿಯಾಗಿ ಪತ್ರಕರ್ತನನ್ನು ಬಂಧಿಸುವ ಮೂಲಕ ಉತ್ತರ ಪ್ರದೇಶ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡಿದ್ದು, ಇದು ಕಾನೂನಿನ ದುರುಪಯೋಗವಲ್ಲದೇ ಮತ್ತೇನಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಸಿಎಂ ಯೋಗಿ ಆದಿತ್ಯನಾಥ್‌ ಕುರಿತು ಆಕ್ಷೇಪಾರ್ಹ ಟೀಕೆ ಮಾಡಿ, ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿ ಹಬ್ಬಿಸಿದ ಆರೋಪದ ಮೇಲೆ ಪ್ರಶಾಂತ್ ಕನೋಜಿಯಾ ಎಂಬ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದರು.