ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಇನ್ನೂ ತಿಣುಕಾಟ ನಡೆಯುತ್ತಿರುವಾಗಲೇ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಕ್ಷದ ಕರ್ನಾಟಕ ಉಸ್ತುವಾರಿ ಮುರಳೀಧರರಾವ್‌ ಹೊಸ ‘ಬಾಂಬ್‌’ ಸಿಡಿಸಿದ್ದಾರೆ. 

ಹೈದರಾಬಾದ್‌: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಇನ್ನೂ ತಿಣುಕಾಟ ನಡೆಯುತ್ತಿರುವಾಗಲೇ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಕ್ಷದ ಕರ್ನಾಟಕ ಉಸ್ತುವಾರಿ ಮುರಳೀಧರರಾವ್‌ ಹೊಸ ‘ಬಾಂಬ್‌’ ಸಿಡಿಸಿದ್ದಾರೆ. 

ಅದು - ಒಂದೋ ಕರ್ನಾಟಕದಲ್ಲಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪೂರ್ಣಾವಧಿ ಮುಗಿಸಲು ಸಾಧ್ಯವಾಗದೆ ಮತ್ತೆ ಬಿಜೆಪಿ ಸರ್ಕಾರ ರಚಿಸುತ್ತದೆ ಅಥವಾ ರಾಜ್ಯಕ್ಕೆ ಮಧ್ಯಂತರ ಚುನಾವಣೆ ಬರುತ್ತದೆ ಎಂದು ಹೇಳಿದ್ದಾರೆ. 

ಅದರಂತೆ ಕರ್ನಾಟಕದಲ್ಲಿ ಸರ್ಕಾರ ರಚನೆಯಾದರೂ ಕೂಡ ಸಂಪುಟ ರಚನೆ ಮಾಡತ್ರ ಹಗ್ಗ ಜಗ್ಗಟವಾಗುತ್ತಿದೆ. ಸಚಿವ ಸ್ಥಾನಗಳಿಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಇನ್ನೂ ಕೂಡ ಎಳೆದಾಟ ನಿಂತಿಲ್ಲ.