Asianet Suvarna News Asianet Suvarna News

ಬೈ ಎಲೆಕ್ಷನ್ ಮುಹೂರ್ತ ಫಿಕ್ಸ್: ಚುನಾವಣಾ ಆಯೋಗ ರೆಡಿ!

ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್ ಮಾಡಿದ ಚುನಾವಣಾ ಆಯೋಗ! ನವೆಂಬರ್ 3 ರಂದು 3 ಲೋಕಸಭೆ, 2 ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ! ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ! ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ಓ.ಪಿ. ರಾವತ್ ಸುದ್ದಿಗೋಷ್ಠಿ! ಡಿಸೆಂಬರ್ 11ರಂದು ಎಲ್ಲಾ ಚುನಾವಣೆಗಳ ಫಲಿತಾಂಶ ಪ್ರಕಟ

Election Commission announces date of by election in Karnataka
Author
Bengaluru, First Published Oct 6, 2018, 3:36 PM IST
  • Facebook
  • Twitter
  • Whatsapp

ನವದೆಹಲಿ(ಅ.6): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ಲೋಕಸಭೆ ಕ್ಷೇತ್ರ, 2 ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

"

ಕರ್ನಾಟಕದ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರಗಳ ಉಪಚುನಾವಣೆ, ರಾಮನಗರ ಮತ್ತು ಜಮಖಂಡಿ ವಿಧಾನಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಫಲಿತಾಂಶವನ್ನು ನವೆಂಬರ್ 6 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ್, ಮಿಜೋರಾಂ, ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ಓ.ಪಿ. ರಾವತ್, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಆಯೋಗ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ತಿಳಿಸಿದರು.

ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಕ್ಷೇತ್ರಗಳು, ರಾಜಸ್ಥಾನದಲ್ಲಿ 200 ವಿಧಾನಸಭಾ ಕ್ಷೇತ್ರಗಳು, ಛತ್ತೀಸ್ ಗಡ್ ನಲ್ಲಿ 90 ಮತ್ತು ಮೀಜೋರಾಂನಲ್ಲಿ 60 ವಿಧಾನಸಭಾ ಕ್ಷೇತ್ರಗಳು, ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅದರಂತೆ ಇಂದಿನಿಂದಲೇ ಈ ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ರಾವತ್ ಮಾಹಿತಿ ನೀಡಿದ್ದಾರೆ.

ಛತ್ತೀಸ್ ಗಡ್ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಒಂದೇ ಹಂತದ ಚುನಾವಣೆ ನಡೆಯಲಿದ್ದು ಛತ್ತೀಸ್ ಗಡ್ ದಲ್ಲಿ ಒಟ್ಟು ಎರಡು ಹಂತದ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

Election Commission announces date of by election in Karnataka 

ಅದರಂತೆ ಛತ್ತೀಸ್ ಗಡ್ ನಲ್ಲಿ 5 ನವೆಂಬರ್ ಮೊದಲ ಹಂತ, 20 ನವೆಂಬರ್ ಎರಡನೇ ಹಂತ, ಮಧ್ಯಪ್ರದೇಶದಲ್ಲಿ 28 ನವೆಂಬರ್, ಮೀಜೋರಾಂನಲ್ಲಿ ೨28ನವೆಂಬರ್, ರಾಜಸ್ಥಾನದಲ್ಲಿ 7 ಡಿಸೆಂಬರ್, ತೆಲಂಗಾಣದಲ್ಲಿ 7 ಡಿಸೆಂಬರ್ ನಂದು ಚುನಾವಣೆ ನಡೆಯಲಿದೆ. ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಡಿಸೆಂಬರ್ 11 ಕ್ಕೆ ಪ್ರಕಟಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.

ಇನ್ನು  ಐದು ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆಗೆ ವಿವಿ ಪ್ಯಾಟ್ ಗಳನ್ನು ಬಳಕೆ ಮಾಡಲಾಗುವುದು ಎಂದು ರಾವತ್ ಸ್ಪಷ್ಟಪಡಿಸಿದ್ದು, ಅಭ್ಯರ್ಥಿಗಳು ಸುಪ್ರೀಂ ಕೋರ್ಟ್ ಆದೇಶವನ್ನು ತಪ್ಪದೇ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow Us:
Download App:
  • android
  • ios