ನವದೆಹಲಿ(ಡಿ.29): ಬಹು ನಿರೀಕ್ಷಿತ ಐದು ರಾಜ್ಯಗಳ ಚುನಾವಣಾ ದಿನಾಂಕ ಜ.4ರಂದು ಘೋಷಣೆಯಾಗುವ ಸಾಧ್ಯತೆ ಇದೆ. 403 ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆಗೆ ಮೊದಲ ಹಂತದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಚುನಾವಣಾ ಆಯೋಗ ಒಂದು ಲಕ್ಷ ಅರೆಸೇನಾಪಡೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಮನವಿ ಮಾಡಿ ಕೇಂದ್ರ ಗೃಹ ಖಾತೆಗೆ ಪತ್ರ ಬರೆದಿತ್ತು. ಅದಕ್ಕೆ ಪೂರಕವಾಗಿ ಗೃಹ ಖಾತೆ ಚುನಾವಣೆ ನಡೆಯಲಿರುವ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದು, ಭದ್ರತೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ.