ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ವೈಮನಸ್ಸು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು: ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ವೈಮನಸ್ಸು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಮೂಲಕ ಚುನಾವಣೆ ನಾಯಕತ್ವದ ಬಗ್ಗೆ ಇರುವ ಗೊಂದಲ ಬಗೆಹರಿಸಿದ ಪರಮೇಶ್ವರ್, ನಮ್ಮ ನಡುವೆ ಯಾವುದೇ ಅಭಿಪ್ರಾಯ ಭೇದವಿಲ್ಲ. ಒಟ್ಟಾಗಿ ಚರ್ಚೆ ಮಾಡಿ ಸಿಎಂ ನೇತೃತ್ವದಲ್ಲೇ ಚುನಾವಣೆ ಎದುರಿಸಲು ನಿರ್ಧಾರ ಮಾಡಲಾಗಿದೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.
