ಕಣಿವೆ ರಾಜ್ಯದ ವಿವಿದೆಡೆ ಉಗ್ರರು ಹಾಗೂ ಪೊಲೀಸರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ.

ಶ್ರೀನಗರ(ಸೆ.11): ಕಣಿವೆ ರಾಜ್ಯದ ವಿವಿದೆಡೆ ಉಗ್ರರು ಹಾಗೂ ಪೊಲೀಸರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ.

ತಂಗ್'ದಾರ್, ಗುರೇಜ್, ನೌಗಾಮ್ ಸೆಕ್ಟರ್'ನಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದ ಭಯೋತ್ಫಾದಕರನ್ನು ಎನ್ಕೌಂಟರ್'ನಲ್ಲಿ ಹೊಡೆದುರುಳಿಸಲಾಗಿದೆ. ಪೂಂಚ್'ನಲ್ಲಿ ಕಟ್ಟಡದಲ್ಲಿ ಅವಿತುಕೊಂಡಿದ್ದ ಇನ್ನೊಬ್ಬ ಉಗ್ರನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.

ಪೂಂಚ್'ನಲ್ಲಿ ಇಬ್ಬರು ಉಗ್ರರು ಭಾರೀ ಶಸ್ತ್ರಾಸ್ತ್ರ ಹೊಂದಿದ ಉಗ್ರರು ಕಾಣಿಸಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದರೆ, ಸಬ್ ಇನ್ಸ್'ಪೆಕ್ಟರ್ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.ಇನ್ನೊಬ್ಬ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.