ಎಂಜಿನಿಯರಿಂಗ್‌ ಶುಲ್ಕ ಎಷ್ಟುಹೆಚ್ಚಳ ?

news | Thursday, June 14th, 2018
Suvarna Web Desk
Highlights

ಸರ್ಕಾರಿ ಕೋಟಾ ಎಂಜಿನಿಯರಿಂಗ್‌ ಸೀಟುಗಳ ಶುಲ್ಕ ಹೆಚ್ಚಳ ಸಂಬಂಧ ಉನ್ನತ ಶಿಕ್ಷಣ ಅಧಿಕಾರಿಗಳು ಹಾಗೂ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘಟನೆಗಳು ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರು :  ಸರ್ಕಾರಿ ಕೋಟಾ ಎಂಜಿನಿಯರಿಂಗ್‌ ಸೀಟುಗಳ ಶುಲ್ಕ ಹೆಚ್ಚಳ ಸಂಬಂಧ ಉನ್ನತ ಶಿಕ್ಷಣ ಅಧಿಕಾರಿಗಳು ಹಾಗೂ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘಟನೆಗಳು ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ.30ರಷ್ಟುಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಈಗಷ್ಟೇ ಹೊಸ ಸರ್ಕಾರ ರಚನೆಯಾಗಿರುವ ಕಾರಣ ಶೇ.30ರಷ್ಟುಶುಲ್ಕ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.

ಕಾಲೇಜುಗಳ ಆಡಳಿತ ಮಂಡಳಿ ಮತ್ತು ಸರ್ಕಾರ ಚರ್ಚಿಸಿ 2006ರಲ್ಲಿಯೇ ಪ್ರತಿ ವರ್ಷ ಶೇ.8ರಷ್ಟುಮಾತ್ರ ಹೆಚ್ಚಳ ಮಾಡಬೇಕು ಎಂದು ಶುಲ್ಕ ನಿಯಂತ್ರಣಕ್ಕೆ ಸಂಬಂಧಿಸಿದ ಕೆಲವು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಅದರಂತೆಯೇ ಈಗ ನಡೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಒಟ್ಟಾರೆ ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ನ್ಯಾ.ಡಿ.ವಿ.ಶೈಲೇಂದ್ರ ಕುಮಾರ್‌ ನೇತೃತ್ವದ ಶುಲ್ಕ ನಿಯಂತ್ರಣ ಸಮಿತಿಯು ಶೇ.8ರಷ್ಟುಶುಲ್ಕ ಹೆಚ್ಚಳ ಮಾಡಿ ಕಾಲೇಜುಗಳಿಗೆ ಮಾತ್ರ ನಿರ್ದೇಶನ ನೀಡಿದೆಯೇ ವಿನಾ ಸರ್ಕಾರದ ಗಮನಕ್ಕೆ ತಂದಿಲ್ಲ. ಆದರೆ, ಸಮಿತಿಯ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋದಲ್ಲಿ, ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಒಕ್ಕೂಟದ ಕಾರ್ಯದರ್ಶಿ ಪಾಂಡುರಂಗಶೆಟ್ಟಿ, ಕಳೆದ ಮೂರು ವರ್ಷಗಳಿಂದ ಶುಲ್ಕ ಹೆಚ್ಚಳ ಮಾಡಿಲ್ಲ. ಕಳೆದ ಬಾರಿ ಕೊನೇ ಗಳಿಗೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಒಪ್ಪಿಕೊಳ್ಳಲಾಗಿತ್ತು. ಈ ಬಾರಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಶೇ.30ರಷ್ಟುಹೆಚ್ಚಳ ಮಾಡಲೇಬೇಕು ಎಂದು ಪಟ್ಟು ಹಿಡಿದರು.

ಧಾರ್ಮಿಕ ಮತ್ತು ಭಾಷಾವಾರು ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘದ ಕಾರ್ಯದರ್ಶಿ ಶಫಿ ಅಹ್ಮದ್‌ ಮಾತನಾಡಿ, ಸರ್ಕಾರಕ್ಕೆ ಶೇ.30 ರಷ್ಟುಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದೇನೆ. ಕನಿಷ್ಠ ಶೇ.15ರಷ್ಟಾದರೂ ಮಾಡಬೇಕು ಎಂದು ಒತ್ತಾಯಿಸಿದರು.

ಖಾಸಗಿ ಕಾಲೇಜುಗಳೊಂದಿಗೆ ಗುರುವಾರ ಸಂಜೆ ಸಭೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಾಗುವುದು. ಮುಂದಿನ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳಲಿದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್‌ ಖತ್ರಿ ತಿಳಿಸಿದ್ದಾರೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Sujatha NR