ಮುಂದಿನ ಮೂರು ದಿನಗಳ ಕಾಲ ಶಾಲಾ, ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ಐದು ದಿನಗಳವರೆಗೆ ಯಾವುದೇ ಕಟ್ಟಡ ನಿರ್ಮಾಣ  ಮತ್ತು ತೆರವು ಮಾಡುವಂತಿಲ್ಲ. ಮುಂದಿನ 10 ದಿನಗಳ ಕಾಲ ಆಸ್ಪತ್ರೆ ಮತ್ತು ತುರ್ತು ಸ್ಥಳಗಳ ಹೊರತುಪಡಿಸಿ ಇತರೆ ಕಡೆ ಡೀಸೆಲ್ ಜನರೇಟರ್ ನಿಷೇಧ ಮಾಡಲಾಗಿದೆ. 

ನವದೆಹಲಿ(ನ.07): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಜನರು ಉಸಿರಾಡಲೂ ಕಷ್ಟಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತುರ್ತು ಕ್ರಮಗಳನ್ನು ಘೋಷಿಸಿದ್ದಾರೆ.

ಮುಂದಿನ ಮೂರು ದಿನಗಳ ಕಾಲ ಶಾಲಾ, ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ಐದು ದಿನಗಳವರೆಗೆ ಯಾವುದೇ ಕಟ್ಟಡ ನಿರ್ಮಾಣ ಮತ್ತು ತೆರವು ಮಾಡುವಂತಿಲ್ಲ. ಮುಂದಿನ 10 ದಿನಗಳ ಕಾಲ ಆಸ್ಪತ್ರೆ ಮತ್ತು ತುರ್ತು ಸ್ಥಳಗಳ ಹೊರತುಪಡಿಸಿ ಇತರೆ ಕಡೆ ಡೀಸೆಲ್ ಜನರೇಟರ್ ನಿಷೇಧ ಮಾಡಲಾಗಿದೆ. 

ಶೀಘ್ರದಲ್ಲೇ ಮತ್ತೊಮ್ಮೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲು ಸಿಎಂ ಕೇಜ್ರಿವಾಲ್​ ಚಿಂತನೆ ನಡೆಸಿದ್ದಾರೆ. ಈ ಮಧ್ಯೆ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧ ಚರ್ಚಿಸಲು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಇಂದು ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ದೆಹಲಿ ಸುತ್ತಲಿನ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಾಗಲಿದ್ದಾರೆ.