ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುವ ಪರಿಪಾಠ ವ್ಯಾಪಕವಾಗಿದೆ. ಒತ್ತಡವನ್ನು ತಡೆಯಲಾಗದೆ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳೂ ಇವೆ.
ನವದೆಹಲಿ(ಮಾ.09): ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಹಪಾಠಿಗಳನ್ನು ಜಾತಿ, ಧರ್ಮ, ಜನಾಂಗೀಯ ಮತ್ತು ಲಿಂಗಭೇದಕ್ಕೆ ಗುರಿಪಡಿಸಿದಲ್ಲಿ, ಅಂಥ ವಿದ್ಯಾರ್ಥಿಗಳನ್ನು ವಜಾ ಮಾಡಬಹುದು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ರ್ಯಾಗಿಂಗ್ ತಡೆಯುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಬಿಡುಗಡೆಗೊಳಿಸಿರುವ ಹೊಸ ಶೈಕ್ಷಣಿಕ ವರ್ಷದ ಮಾರ್ಗಸೂಚಿಗಳಲ್ಲಿ ಈ ವಿಷಯ ತಿಳಿಸಲಾಗಿದೆ.
