ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಅನುಮತಿ ನೀಡಬೇಕೆನ್ನುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ನವದೆಹಲಿ (ಅ.13): ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಅನುಮತಿ ನೀಡಬೇಕೆನ್ನುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಻ರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ವಿವಿಧ ಮಹಿಳಾಪರ ಸಂಘಟನೆಗಳು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಪ್ರಮುಖ 6 ಪ್ರಶ್ನೆಗಳೊಂದಿಗೆ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.ಆ ಪ್ರಶ್ನೆಗಳು ಹೀಗಿವೆ:

  1. ಶಬರಿಮಲೆ ದೇವಾಲಯದಲ್ಲಿ ಮಹಿಳೆಯರು ಪೂಜೆ ಸಲ್ಲಿಸಬೇಕೆ? ಬೇಡವೇ?
  2. ಪೂಜೆ ನಿಷೇಧಿಸಿದರೆ ಕಾನೂನು ಉಲ್ಲಂಘನೆ ಆಗುವುದಿಲ್ಲವೇ?
  3. ಮಹಿಳೆಯರ ಪ್ರವೇಶ ನಿರ್ಬಂಧಿಸುವ ಹಕ್ಕು ದೇಗುಲಕ್ಕೆ ಇದೆಯೇ?
  4. ದೇಗುಲದ ಈ ನಡೆಯಿಂದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಲಿದೆಯೇ? ಎಂಬಿತ್ಯಾದಿ ಅಂಶಗಳನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠಕ್ಕೆ ಸೂಚಿಸಿದೆ. ಶಬರಿಮಲೆ ದೇವಸ್ಥಾನಕ್ಕೆ 10 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣು ಮಕ್ಕಳಿಗೆ ಹಾಗೂ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳ ಮುಟ್ಟಿನ ಕಾರಣಕ್ಕೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಸ್ಪಷ್ಟನೆ ಕೊಟ್ಟಿದೆ. ಹಲವಾರು ಮಹಿಳಾಪರ ಸಂಘಟನೆಗಳು ದೇಗುಲ ಪ್ರವೇಶ ಕೋರಿ ಕೋರ್ಟ್ ಮೆಟ್ಟಿಲೇರಿವೆ. ಐವರು ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ ವಿಚಾರಣೆಯನ್ನು ನಡೆಸಲಿದೆ.