ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಅನಿಲ್ ಮಾಧವ್ ದಾವೆ ನಿಧನ ಹೊಂದಿದ್ದಾರೆ. ಸಚಿವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನವದೆಹಲಿ(ಮೇ.18): ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಅನಿಲ್ ಮಾಧವ್ ದಾವೆ ನಿಧನ ಹೊಂದಿದ್ದಾರೆ. ಸಚಿವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
2009ರಿಂದ ರಾಜ್ಯಸಭಾ ಸಚಿವರಾಗಿರುವ ಮಧ್ಯಪ್ರದೇಶದ ಬರ್ನಾಗಲ್ ಮೂಲದ ಅನಿಲ್ ದಾವೆ ಮೋದಿ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಮುಂಜಾನೆ ಅವರು ಅಕಾಲಿಕ ಮರಣಕ್ಕೀಡಾಗಿದ್ದಾರೆ.
ಸಚಿವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ 'ಸಂಜೆಯಷ್ಟೇ ಮಾತುಕತೆ ನಡೆಸಿದ್ದೆ. ಅವರ ಸಾವಿನ ಸುದ್ದಿ ನಿಜಕ್ಕೂ ಶಾಕ್ ನೀಡಿದಂತಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.
