ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸುವ ಪ್ರಯತ್ನವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿಸುತ್ತಿದೆ. ವಿಡಿಯೋ , ಪೋಟೋಗಳನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇವೆ. ಮುಸಲ್ಮಾನ ಗೂಂಡಾಗಳು ಪೊಲೀಸರ ಜೊತೆಗೇ ಇದ್ದ ಪೋಟೋ , ವಿಡಿಯೋಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ರಾಜಭವನ ಚಲೋ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರು (ಡಿ.12): ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ, ಹಿಂದೂ ಕಾರ್ಯಕರ್ತರ ಕೊಲೆ ಮಾಡಿಸುವ ಪ್ರಯತ್ನವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿಸುತ್ತಿದೆ. ವಿಡಿಯೋ , ಪೋಟೋಗಳನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇವೆ. ಮುಸಲ್ಮಾನ ಗೂಂಡಾಗಳು ಪೊಲೀಸರ ಜೊತೆಗೇ ಇದ್ದ ಪೋಟೋ , ವಿಡಿಯೋಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ರಾಜಭವನ ಚಲೋ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.

ಪರೇಶ್ ಮೆಸ್ತಾ ಕೊಲೆಯಾಗುತ್ತಿರುವ ಇಪ್ಪತ್ತನೇ ಹಿಂದೂ ಯುವಕ. ಮರಣೋತ್ತರ ಪರೀಕ್ಷಾ ವರದಿ ಸೇರಿದಂತೆ ಪೊಲೀಸರನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಪರೇಶ್ ಮೆಸ್ತಾ ಪಾಲಕರೂ ಕೂಡಾ ನನ್ನ ಮಗನನ್ನು ಹೊಡೆದು ಹೊಡೆದೂ ಸಾಯಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ರಾಜ್ಯಪಾಲರು ಈ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ತನಿಖೆ ನಡೆಸುವಂತೆ ಹೇಳಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.