ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಕಲಹವನ್ನು ತಣ್ಣಗಾಗಿಸಲು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು :  ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಕಲಹ ಇದೀಗ ಮಿತಿ ಮೀರಿದ್ದು ಶುಕ್ರವಾರ ನಡೆಯುವ ಪಿಎಲ್ ಡಿ ಬ್ಯಾಂಕ್ ಚುನಾವಣೆ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. 

ಇದೀಗ ಇವರ ನಡುವಿನ ಕಲಹವನ್ನು ತಣ್ಣಗಾಗಿಸಲು ಸಿದ್ದರಾಮಯ್ಯ ಸಲಹೆ ನೀಡಿದ್ದು ಸಂಧಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಮಧ್ಯ ಪ್ರವೇಶಿಸುವಂತೆ ಸೂಚಿಸಿದ್ದಾರೆ. 

ಸಂಧಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರವೇಶಿಸಲು ತಿಳಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ಜೊತೆ ಖಂಡ್ರೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. 

ಇದೇ ವೇಳೆ ಸಿದ್ದರಾಮಯ್ಯಗೆ ಜಾರಕಿಹೊಳಿ ಬ್ರದರ್ಸ್ ಹಾಗೂ ಹೆಬ್ಬಾಳ್ಕರ್ ಫೈಟ್ ಬಗ್ಗೆ ಖಂಡ್ರೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸತೀಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯಗೆ ಖಂಡ್ರೆ ಮನವಿ ಮಾಡಿದ್ದಾರೆ. ಎರಡೂ ಬಣಕ್ಕೆ ಒಪ್ಪಿಗೆಯಾಗುವರನ್ನ ಅಧ್ಯಕ್ಷರನ್ನಾಗಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.