ಸಂಘದ ಪ್ರಚಾರಕರಾಗಿರುವ ಅವರ ಹೆಸರನ್ನು ಪ್ರಸ್ತಾಪಿಸಿ ಯಡಿಯೂರಪ್ಪ ಅವರು ಆಪಾದನೆ ಮಾಡಿದ್ದು ತಪ್ಪು. ಜತೆಗೆ ಸಂಘ ಮೂಲದ ಭಾನುಪ್ರಕಾಶ್‌ ಮತ್ತು ನಿರ್ಮಲಕುಮಾರ್‌ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯಲ್ಲ ಎನ್ನುತ್ತಿರುವ ಈಶ್ವರಪ್ಪ ಅವರು ಈ ಮೂಲಕ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರ ಒಲವು ಗಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಬೆಂಗಳೂರು (ಮೇ.04): ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ವಿರುದ್ಧ ಯಡಿಯೂರಪ್ಪ ಅವರು ಮಾತನಾಡಿರುವುದನ್ನೇ ಮುಂದಿಟ್ಟುಕೊಂಡು ಈಶ್ವರಪ್ಪ ಮೈಸೂರಿನ ಕಾರ್ಯಕಾರಿಣಿ ಸಭೆಗೆ ಗೈರುಹಾಜರಾಗುವ ಸಾಧ್ಯತೆಯಿದೆ.
ಸಂಘದ ಪ್ರಚಾರಕರಾಗಿರುವ ಅವರ ಹೆಸರನ್ನು ಪ್ರಸ್ತಾಪಿಸಿ ಯಡಿಯೂರಪ್ಪ ಅವರು ಆಪಾದನೆ ಮಾಡಿದ್ದು ತಪ್ಪು. ಜತೆಗೆ ಸಂಘ ಮೂಲದ ಭಾನುಪ್ರಕಾಶ್ ಮತ್ತು ನಿರ್ಮಲಕುಮಾರ್ ಸುರಾನಾ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯಲ್ಲ ಎನ್ನುತ್ತಿರುವ ಈಶ್ವರಪ್ಪ ಅವರು ಈ ಮೂಲಕ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರ ಒಲವು ಗಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಹೀಗಾಗಿ, ಈ ತಿಂಗಳ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಬದಲು ಗೈರಾಗುವುದೇ ಸೂಕ್ತ ಎಂಬ ಚಿಂತನೆಯಲ್ಲಿರುವ ಈಶ್ವರಪ್ಪ, ಇನ್ನೆರಡು ದಿನಗಳಲ್ಲಿ ತಮ್ಮ ಆಪ್ತರೊಂದಿಗೆ ಮಾತುಕತೆ ನಡೆಸಿ ಸ್ಪಷ್ಟತೀರ್ಮಾನ ಕೈಗೊಳ್ಳಲಿದ್ದಾರೆ.
‘ರಾಜಕುಮಾರ' ಸಿನಿಮಾ ನೋಡಿದ ಈಶ್ವರಪ್ಪ!
