Asianet Suvarna News Asianet Suvarna News

ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡುವಂತೆ ಕೇಜ್ರಿವಾಲ್'ಗೆ ಅಮಿತ್ ಶಾ ಕರೆ

ಎವಿಎಂಗಳ ಕಾರ್ಯಕ್ಷಮತೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್'ಗೆ ಇರುವ ಸಂಶಯಗಳನ್ನು ಬಗೆಹರಿಸಿಕೊಳ್ಳಲು ಬಿಜೆಪಿ ಮತಗಟ್ಟೆಗಳ ಉಸ್ತುವಾರಿ ಅಧಿಕಾರಿಗಳನ್ನು ಭೇಟಿ ಮಾಡಲು ಅಮಿತ್ ಶಾ ಕೇಜ್ರಿವಾಲ್'ಗೆ ಕರೆ ನೀಡಿದ್ದಾರೆ.

EVM Row Amith Sha Invites Kejriwal To Meet BJP Booth In Charges
  • Facebook
  • Twitter
  • Whatsapp

ನವದೆಹಲಿ (ಮೇ.02): ಎವಿಎಂಗಳ ಕಾರ್ಯಕ್ಷಮತೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್'ಗೆ ಇರುವ ಸಂಶಯಗಳನ್ನು ಬಗೆಹರಿಸಿಕೊಳ್ಳಲು ಬಿಜೆಪಿ ಮತಗಟ್ಟೆಗಳ ಉಸ್ತುವಾರಿ ಅಧಿಕಾರಿಗಳನ್ನು ಭೇಟಿ ಮಾಡಲು ಅಮಿತ್ ಶಾ ಕೇಜ್ರಿವಾಲ್'ಗೆ ಕರೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತನಾಡುತ್ತಾ, ನಮ್ಮ ಗೆಲುವಿಗೆ ಇವಿಎಂ ಕಾರಣವೆಂದು ಕೇಜ್ರಿವಾಲ್ ದೂಷಿಸುತ್ತಾರೆ. ನಮ್ಮ ಮತಗಟ್ಟೆ ಉಸ್ತುವಾರಿ ಅಧಿಕಾರಿಗಳನ್ನು ಭೇಟಿ ಮಾಡಿ ನಿಜವಾದ ಕಾರಣಗಳನ್ನು ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಯ ಗೆಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇ ಸರ್ಕಾರ ರಚಿಸಲು ಇದೊಂದು ವೇದಿಕೆ ಎಂದಿದ್ದಾರೆ. ಡಿಜಿಟಲ್ ಇಂಡಿಯಾದ ಮೂಲಕ ಬಿಜೆಪಿ ಯುವಕರ ಕೌಶಲ್ಯವನ್ನು ಹೆಚ್ಚಿಸಿದೆ. ಅದೇ ರೀತಿ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಪೂರೈಸುವುದರ ಮೂಲಕ ಉತ್ತೇಜನ ನೀಡಿದೆ ಎಂದರು.  

Follow Us:
Download App:
  • android
  • ios