ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ತಮ್ಮ ಆಪ್ತರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ಅಕ್ರಮವಾಗಿ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರಾದ ಗಂಗರಾಜು ಹಾಗೂ ಸಂಗಮೇಶ್ ದೂರು ದಾಖಲಿಸಿದ್ದರು.

ಮೈಸೂರು[ಜೂ.23]: ರಾಜಕೀಯ ಜಂಜಾಟದಿಂದ ಸ್ವಲ್ಪಕಾಲ ದೂರವಿರಲು ನಿರ್ಧರಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟವೊಂದು ಎದುರಾಗಿದ್ದು ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್’ಐಆರ್ ದಾಖಲಾಗಿದೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿಗೆ ಕಾನೂನು ಸಂಕಟ ಎದುರಾಗಿದ್ದು, 25 ವರ್ಷಗಳ ಹಳೆಯ ಪ್ರಕರಣವೀಗ ಜೀವ ಪಡೆದಿದೆ. ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಮಾಜಿ ಸಿಎಂ ವಿರುದ್ಧ ಎಫ್​ಐಆರ್​ ದಾಖಲಿಸಲು ಕೋರ್ಟ್ ಆದೇಶಿಸಿತ್ತು. ಇದೀಗ ಮಾಜಿ ಸಿಎಂ ಸೇರಿ ನಾಲ್ಕು ಜನರ ವಿರುದ್ಧ 9 ಕ್ರಿಮಿನಲ್ ಸೆಕ್ಷನ್​ಗಳಡಿ[ಸೆಕ್ಷನ್​ 120ಬಿ, 197, 166, 167, 169, 200, 417, 409, 420 ಹಾಗೂ ಐಪಿಸಿ ಸೆಕ್ಷನ್​ 468 ] ಕೇಸ್​ ದಾಖಲಿಸಲಾಗಿದೆ.

ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ತಮ್ಮ ಆಪ್ತರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ಅಕ್ರಮವಾಗಿ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರಾದ ಗಂಗರಾಜು ಹಾಗೂ ಸಂಗಮೇಶ್ ದೂರು ದಾಖಲಿಸಿದ್ದರು.