ನವದೆಹಲಿ (ಅ.20): ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷೆ ರೀತಾ ಬಹುಗುಣ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರೀತಾರವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಇದು ಸುಲಭವಾದ ನಿರ್ಧಾರವಲ್ಲ. ಸಾಕಷ್ಟು ಯೋಚನೆ ಮಾಡಿ ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಅಭಿವೃದ್ಧಿ ಮತ್ತು ರಾಜ್ಯ ಹಿತದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ. ನನ್ನ 27 ವರ್ಷ ರಾಜಕೀಯ ವೃತ್ತಿ ಜೀವನದಲ್ಲಿ 24 ವರ್ಷ ಕಾಂಗ್ರೆಸ್ ಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಂದು ಬಿಜೆಪಿ ಸೇರಿರುವುದಕ್ಕೆ ಖುಷಿಯಾಗುತ್ತಿದೆ ಎಂದರು.