ಕಾಂಗ್ರೆಸ್ ಮಾಜಿ ಸಚಿವರೊಬ್ಬರು ಮಾಜಿ ಪ್ರದಾನಿ ಎಚ್.ಡಿ ದೇವೇಗೌಡ ಅವರ ಕುಟುಂಬದ ವಿರುದ್ದ ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ.

ಹಾಸನ, [ಅ.10]: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎ. ಮಂಜು ಅವರು ಮಾಜಿ ಪ್ರದಾನಿ ದೇವೇಗೌಡ ಕುಟುಂಬದ ವಿರುದ್ಧ ಸಿಡಿದೆದ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧೆಡೆ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಮ್ಮ ಪ್ರಭಾವ ಬಳಿಸಿ, 69 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು ಎ.ಮಂಜು ಗಂಭೀರ ಆರೋಪ ಮಾಡಿದ್ದಾರೆ.

 ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ತಮ್ಮ ಅಣ್ಣನನ್ನು ರಕ್ಷಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಂತಿದ್ದಾರೆ. ಭೂ ಕಬಳಿಕೆ ಆರೋಪ ನಿರಾಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೇವಣ್ಣ ವಿರುದ್ದ ಮೂರು ದಿನಗಳಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ‍್ಳದಿದ್ದರೆ ಕಾನೂನು ಸಮರ ಸಾರುವುದಾಗಿ ಎ.ಮಂಜು ಎಚ್ಚರಿಸಿದ್ದಾರೆ. ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್ ಹಾಗೂ ತಾಯಿ ಹೆಸರಿಗೆ ಜಮೀನು ವರ್ಗಾವಣೆ ಮಾಡಿರುವ ದಾಖಲೆಗಳನ್ನು ಬಿಡುಗಡೆಗೊಳಿಸಲಾಗಿದೆ.

ಭೂ ಕಬಳಿಕೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವ ಪ್ರಶ್ನೇಯೇ ಇಲ್ಲ ಎಂದು ಗುಡುಗಿದರು.