ನವದೆಹಲಿ : ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದ ಶಾಸಕಿ ಡಾ. ಆಶಾ ಪಟೇಲ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.  

ಪಟನ್ ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷ ಸೇರಿದ್ದಾರೆ. ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಆಶಾ ಪಟೇಲ್   25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಪಕ್ಷದಲ್ಲಿ ಅತೃಪ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ. 

ಆಶಾ ಬಿಜೆಪಿ ಸೇರ್ಪಡೆಯಾಗುವ ಮುನ್ನ  ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಗುಜರಾತ್ ಬಿಜೆಪಿ ಮುಖಂಡ  ಜಿತು ವಘಾನಿ, ಮಾಜಿ ಬಿಜೆಪಿ  ಶಾಸಕ ಊಂಜಾ, ನಾರನ್ ಪಟೇಲ್ ಭೇಟಿಯಾಗಿ ಮಾತುಕತೆ ನಡೆಸಿದ್ದರು. 

ಫೆಬ್ರವರಿ 8 ರಂದು ಬಿಜೆಪಿ ಮುಖಂಡರ ನೇತೃತ್ವದಲ್ಲಿ  ಉಜ್ನಾ ನಗರ್ ಮುನಿಸಿಪಾಲಿಟಿ ಕಾರ್ಪೊರೇಷನ್  15 ಸದಸ್ಯರು ಹಾಗೂ 7 ಉಜ್ನಾ ತಾಲೂಕು ಪಂಚಾಯತ್ ಸದಸ್ಯರೊಂದಿಗೆ  ಬಿಜೆಪಿ ಸೇರಿದ್ದಾರೆ. 

ಅಲ್ಲದೇ ಇದೇ ವೇಳೆ ಇನ್ನೂ 25  ಶಾಸಕರು ಅಸಮಾಧಾನಗೊಂಡಿದ್ದು, ಪಕ್ಷ ತೊರೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ.