ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಅಧಿಕಾರಿಗೆ 4 ವರ್ಷ ಜೈಲು

Ex GM of KSDL gets 4-yr jail term
Highlights

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ ಆ್ಯಂಡ್ ಡಿಟರ್ಜೆಂಟ್ಸ್ ಸಂಸ್ಥೆಯ ನಿವೃತ್ತ ಪ್ರಧಾನ ವ್ಯವಸ್ಥಾಪಕ ಜಿ.ಎಸ್ .ಭಟ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ನಾಲ್ಕು ವರ್ಷ ಸಜೆ ಮತ್ತು ಮೂರು ಕೋಟಿ ರು. ದಂಡ ವಿಧಿಸಿ ತೀರ್ಪು ನೀಡಿದೆ. 

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ ಆ್ಯಂಡ್ ಡಿಟರ್ಜೆಂಟ್ಸ್ ಸಂಸ್ಥೆಯ ನಿವೃತ್ತ ಪ್ರಧಾನ ವ್ಯವಸ್ಥಾಪಕ ಜಿ.ಎಸ್ .ಭಟ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ನಾಲ್ಕು ವರ್ಷ ಸಜೆ ಮತ್ತು ಮೂರು ಕೋಟಿ ರು. ದಂಡ ವಿಧಿಸಿ ತೀರ್ಪು ನೀಡಿದೆ. 

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದ ಜಿ.ಎಸ್.ಭಟ್ ಶಿಕ್ಷೆ ಗೊಳಾಗಿರುವ ಅಪರಾಧಿ. 2004ರಲ್ಲಿ ಬೆಂಗಳೂರಿನ ವಿಜಯನಗರದಲ್ಲಿದ್ದ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಿದ್ದರು. ಪೊಲೀಸರು ನಡೆಸಿದ ಪರಿಶೀಲನೆ ವೇಳೆ 1.6 ಕೋಟಿ ರು. ಅಕ್ರಮ ಪತ್ತೆಯಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು 2009 ರಲ್ಲಿ ತನಿಖೆ ಮುಕ್ತಾಯಗೊಳಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಜಿ.ಎಸ್ .ಭಟ್ ವಿರುದ್ಧದ ಆರೋಪ ಸಾಬೀತಾಗಿದೆ. 

ನ್ಯಾಯಾಲಯವು ಆರೋಪಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 3 ಕೋಟಿ ರು. ದಂಡ ವಿಧಿಸಿದೆ. ದಂಡ ಪಾವತಿಸದಿದ್ದರೆ ಒಂದೂವರೆ ವರ್ಷ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

loader