ಯುಗಾದಿ ಬಳಿಕ ದೊಡ್ಡ ಪ್ರಮಾಣದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ ಅಂಬರೀಶ್ ಮತ್ತು ಹಲವು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ
ಯುಗಾದಿ ಬಳಿಕ ಬಿಜೆಪಿಯಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ. ಕಾಂಗ್ರೆಸ್'ನ ಹಾಲಿ ಮತ್ತು ಮಾಜಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಬಿಜೆಪಿ ಶಾಸಕ ಸಿ. ಟಿ ರವಿ ಇಂದು ಅಧಿವೇಶನದ ಬಿಳಿಕ ವಿಧಾನಸಭೆಯ ಆವರಣದಲ್ಲಿ ಕ್ರಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ಯುಗಾದಿ ಬಳಿಕ ದೊಡ್ಡ ಪ್ರಮಾಣದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ ಅಂಬರೀಶ್ ಮತ್ತು ಹಲವು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಸಂಪರ್ಕದಲ್ಲಿರುವುದರಿಂದ ಆ ನಾಯಕರ ಹೆಸರು ಬಹಿರಂಗಪಡಿಸುವುದಿಲ್ಲ ಕಾದು ನೋಡಿ ಎಂದು ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.
