ಇದಕ್ಕೆ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್'ಗೆ ಅವಕಾಶ ನೀಡಲು ಚುನಾವಣಾ ನಿವೃತ್ತಿ ಘೋಷಿಸಿದ್ದೇನೆ ಎಂದಿದ್ದಾರೆ.

ಮಂಗಳೂರು(ಅ.9): ಮಾಜಿ ಸಚಿವರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿನಲ್ಲಿಯೇ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ಇವರು ಮತ್ಯಾರು ಅಲ್ಲ ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಅಭಯ್ ಚಂದ್ರ ಜೈನ್. ಮಂಗಳೂರಿನ ಶಾಸಕ ಐವಾನ್ ಡಿಸೋಜಾ ಮನೆಯಲ್ಲಿ ಉಪಹಾರ ಕೂಟದ ವೇಳೆ ಶಾಸಕ ಅಭಯ್ ಚಂದ್ರ ಜೈನ್ ಸ್ವತಃ ಈ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್'ಗೆ ಅವಕಾಶ ನೀಡಲು ಚುನಾವಣಾ ನಿವೃತ್ತಿ ಘೋಷಿಸಿದ್ದೇನೆ ಎಂದಿದ್ದಾರೆ.
ಮುಲ್ಕಿಯ ಮೂಡಬಿದರಿ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಹಾಗೂ 2 ಬಾರಿ ವಿಧಾನ ಪರಿಷತ್ ಸಸಸ್ಯರಾಗಿ ಆಯ್ಕೆಯಾಗಿದ್ದರು. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಯುವಜನ, ಕ್ರೀಡಾ, ಮೀನುಗಾರಿಕೆ ಸಚಿವರಾಗಿದ್ದರು. ಕೆಲವು ತಿಂಗಳ ಹಿಂದಷ್ಟೆ ಇವರನ್ನು ಸಂಪುಟದಿಂದ ಕೈಬಿಡಲಾಗಿತ್ತು.