ಬೆಂಗಳೂರು : ಹರಪನಹಳ್ಳಿ ಮಾಜಿ ಶಾಸಕ ಎಂ.ಪಿ ರವೀಂದ್ರ ಅವರು ತೀವ್ರ ಅನಾರೋಗ್ಯ ದಿಂದ ಶನಿವಾರ ಮುಂಜನೆ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮುಂಜಾನೆ 3.45ಕ್ಕೆ ನಿಧನರಾಗಿದ್ದಾರೆ. 

ಕಳೆದ ಮೂರು ತಿಂಗಳ ಹಿಂದೆ ರವೀಂದ್ರ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು. ಈ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ರವೀಂದ್ರ ಅವರು ಮಾಜಿ ಸಚಿವ ಎಂ.ಪಿ ಪ್ರಕಾಶ್ ಅವರ ಪುತ್ರರಾಗಿದ್ದು 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಸಿ ಜಯಗಳಿಸಿದ್ದರು.