ನಟ ಹಾಗೂ ನಿರ್ಮಾಪಕ ರಾಜ ಶೇಖರ್ ಕೋಟ್ಯಾನ್ ಹಾಗೂ ಜೆಡಿಎಸ್ ಮಾಜಿ ಶಾಸಕ ಪಿ. ಎಸ್. ಪ್ರಕಾಶ್, ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಪುಟ್ಟಸಿದ್ದ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರು(ಸೆ.28): ನಟ ಹಾಗೂ ನಿರ್ಮಾಪಕ ರಾಜ ಶೇಖರ್ ಕೋಟ್ಯಾನ್ ಹಾಗೂ ಜೆಡಿಎಸ್ ಮಾಜಿ ಶಾಸಕ ಪಿ. ಎಸ್. ಪ್ರಕಾಶ್, ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಪುಟ್ಟಸಿದ್ದ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕೇಂದ್ರ ಕಚೇರಿ ಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಬರುತ್ತಿರುವ ಕೆ.ಆರ್. ಪೇಟೆ ಮಾಜಿ ಶಾಸಕ ಪಿ.ಎಸ್. ಪ್ರಕಾಶ್, ಎನ್. ಪುಟ್ಟಸಿದ್ದ ಶೆಟ್ಟಿ ಹಾಗೂ ಅವರ ಬೆಂಬಲಿಗರನ್ನು ಪರಮೇಶ್ವರ್ ಪಕ್ಷದ ‘ಧ್ವಜ ನೀಡುವ ಮೂಲಕ ಸ್ವಾಗತಿಸಿದರು.
ಇದೇ ವೇಳೆ ರಾಜಶೇಖರ್ ಕೋಟ್ಯಾನ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಕಳೆದ ನಾಲ್ಕು ವರ್ಷಗಳ ಅವಧಿ ಯಲ್ಲಿ ಸರ್ಕಾರ ಮಾಡಿರುವ ಸಾಧನೆಗಳಿಂದ ಪ್ರೇರಣೆಗೊಂಡು ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್‌ನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕಿದೆ ಎಂದು ಕರೆ ನೀಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಹಾಜರಿದ್ದರು.
