ಮೈಸೂರಿನಲ್ಲಿ ಮೇ 6 ಮತ್ತು 7ರಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಉಪಾಧ್ಯಕ್ಷ ಜವಾಬ್ದಾರಿ ನೀಡಲಾಗಿದೆ. ಮೈಸೂರು ಭಾಗದ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಮತ್ತು ದಲಿತ ಸಮುದಾಯವನ್ನು ಸೆಳೆಯುವ ಉದ್ದೇಶದಿಂದ ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಉಪಾಧ್ಯಕ್ಷ ಹೊಣೆಗಾರಿಕೆ ವಹಿಸಲಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು (ಮೇ.03): ಮೈಸೂರಿನಲ್ಲಿ ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಬೆಂಗಳೂರು ಪಾಲಿಕೆಯ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಕುರುಬ ಸಮಾಜದ ಮುಖಂಡ ಎಂ.ನಾಗರಾಜುರನ್ನು ವಿಶೇಷ ಆಹ್ವಾನಿತರನ್ನಾಗಿ ಕರೆಯಲಾಗಿದ್ದು, ಪಕ್ಷದ ಭಿನ್ನಮತ ಅಲ್ಲಿಗೂ ವ್ಯಾಪಿಸುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಮೇ 6 ಮತ್ತು 7ರಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಉಪಾಧ್ಯಕ್ಷ ಜವಾಬ್ದಾರಿ ನೀಡಲಾಗಿದೆ. ಮೈಸೂರು ಭಾಗದ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಮತ್ತು ದಲಿತ ಸಮುದಾಯವನ್ನು ಸೆಳೆಯುವ ಉದ್ದೇಶದಿಂದ ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಉಪಾಧ್ಯಕ್ಷ ಹೊಣೆಗಾರಿಕೆ ವಹಿಸಲಾಗಿದೆ ಎಂದು ಹೇಳಲಾಗಿದೆ.

ಕಳೆದ ಉಪಚುನಾ ವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಶ್ರೀನಿವಾಸ್‌ ಪ್ರಸಾದ್‌ ಸೋಲು ಅನುಭವಿಸಿದ್ದರು. ಸೋಲಿನಿಂದ ಬೇಸರ ಗೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿ ಯುವ ಸಾಧ್ಯತೆ ಇರುವ ಕಾರಣ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಈ ಹುದ್ದೆಯು ಸಹಕಾರಿಯಾಗಲಿದೆ.

ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಶ್ರೀನಿವಾಸ್‌ ಪ್ರಸಾದ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಳಿಕ ನಡೆದ ಉಪಚುನಾವಣೆಯಲ್ಲಿ ಸೋಲನುಭವಿಸಿದ್ದು, ನಂತರದ ದಿನದಲ್ಲಿ ಪಕ್ಷದ ಚಟುವಟಿಕೆಯಲ್ಲಿ ಅಷ್ಟೇನೂ ಕಾಣಿಸಿಕೊಂಡಿರಲಿಲ್ಲ. ಪಕ್ಷದಲ್ಲಿ ಯಾವುದೇ ಸ್ಥಾನ-ಮಾನ ಇಲ್ಲದ ಕಾರಣ ಸಂಘಟನೆಯಲ್ಲಿ ತೊಡಗಿಸಿಕೊಂಡಿರಲಿಲ್ಲ. ಇದೀಗ ಉಪಾಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳುವ ಮೂಲಕ ಪಕ್ಷದಲ್ಲಿ ಸಕ್ರಿಯವಾಗಲಿದ್ದಾರೆ.