ನಗರದಿಂದ ರಾಜ್ಯದ ವಿವಿಧೆಡೆಗೆ ಸಂಚರಿಸಲು ಏ.13 ಮತ್ತು 15ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು  300 ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಂಬೇಡ್ಕರ್‌ ಜಯಂತಿ ಹಾಗೂ ಗುಡ್‌ ಫ್ರೈಡೇ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ನಗರದಿಂದ ರಾಜ್ಯದ ವಿವಿಧೆಡೆಗೆ ಸಂಚರಿಸಲು ಏ.13 ಮತ್ತು 15ರಂದು 300 ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಿದೆ. ಅಂತೆಯೆ ನಗರಕ್ಕೆ ಹಿಂದಿರುಗ ಲು ಏ.16ರಂದು ರಾಜ್ಯ ಹೊರ ರಾಜ್ಯಗಳಿಂ ದಲೂ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ.

ಕೆಂಪೇಗೌಡ ಬಸ್‌ ನಿಲ್ದಾಣ:

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರ ನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ಪಾವಗಡ, ಹೊಸದುರ್ಗ ಮಾರ್ಗ.

ಸ್ಯಾಟ್‌ಲೈಟ್‌ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗ.

ಶಾಂತಿನಗರದ ನಿಲ್ದಾಣ: ತಮಿಳುನಾಡು ಮತ್ತು ಆಂಧ್ರಪ್ರದೇಶ- ಮಧುರೈ.