ಹಲವು ಕರ್ಮಕಾಂಡಗಳಿಂದಾಗಿ ದೇಶದ ಗಮನ ಸೆಳೆದಿದ್ದ ಪರಪ್ಪನ ಆಗ್ರಹಾರ ಜೈಲಿನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾಗೆ ನೀಡಲಾಗಿದ್ದ ಹೆಚ್ಚುವರಿ ಸೌಲಭ್ಯಗಳನ್ನು ಹಿಂಪಡೆಯಲಾಗಿದೆ.

ಬೆಂಗಳೂರು(ಜು.19): ಹಲವು ಕರ್ಮಕಾಂಡಗಳಿಂದಾಗಿ ದೇಶದ ಗಮನ ಸೆಳೆದಿದ್ದ ಪರಪ್ಪನ ಆಗ್ರಹಾರ ಜೈಲಿನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾಗೆ ನೀಡಲಾಗಿದ್ದ ಹೆಚ್ಚುವರಿ ಸೌಲಭ್ಯಗಳನ್ನು ಹಿಂಪಡೆಯಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೈಲಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ನೀಡಿದ ಸುದ್ದಿ ದೇಶದಲ್ಲಿ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಜುಗರಕ್ಕೊಳಗಾದ ಹಿನ್ನೆಲೆಯಲ್ಲಿ ಶಶಿಕಲಾ ಅವರಿಗೆ ಸವಲತ್ತುಗಳನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಶಿಕಲಾ ಅವರಿಗೆ ನೀಡಲಾದ ವಿಶೇಷ ಸೌಲಭ್ಯಗಳನ್ನು ವಾಪಸ್ ಪಡೆಯಲಾಗಿದ್ದು, ಸಾಮಾನ್ಯ ಕೈದಿಯಂತೆ ನೋಡಲಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜೈಲಿನ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಿನ ಉಪಾಹಾರವನ್ನು ಜೈಲಿನ ಸಾಮಾನ್ಯ ಕೈದಿಗಳಿಗೆ ನೀಡುವಂತೆ ಶಶಿಕಲಾ ಅವರಿಗೆ ನೀಡಲಾಗುತ್ತಿದ್ದು, ಉಡುಪನ್ನು ಸಹ ಇತರೆ ಕೈದಿಗಳಂತೆ ಧರಿಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.