ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರು ನಾಮಕರಣ! ಯುಪಿ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ! ಅಯೋಧ್ಯೆಯಲ್ಲಿ ಭರ್ಜರಿ ದೀಪಾವಳಿ ಕಾರ್ಯಕ್ರಮ! ಸಮಾರಂಭದಲ್ಲಿ ದ.ಕೋರಿಯಾ ಪ್ರಥಮ ಮಹಿಳೆ ಕಿಮ್ ಹುಂಗ್ ಸೂಕ್
ಲಕ್ನೋ(ನ.6): ಅಲಹಾಬಾದ್ ಹೆಸರನ್ನು ಪ್ರಯಾಗ್ ರಾಜ್ ಎಂದು ಬದಲಾಯಿಸಿದ್ದ ಬೆನ್ನಲ್ಲೇ, ಇದೀಗ ಫೈಜಾಬಾದ್‌ಗೆ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ದೀಪಾವಳಿ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ್, ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.
ಇನ್ನು ಅಯೋಧ್ಯೆ ನಂಟಿರುವ ದಕ್ಷಿಣ ಕೊರಿಯಾದ ಪ್ರಥಮ ಮಹಿಳೆ ಕಿಮ್ ಜುಂಗ್ ಸೂಕ್,ಅಯೋಧ್ಯೆಯಲ್ಲಿ ನಡೆಯುತ್ತಿರುವ ದೀಪಾವಳಿ ಕಾರ್ಯಮಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೂಕ್ ಭಾರತಕ್ಕೆ ಭೇಟಿ ನೀಡಿದ್ದಾರೆ.
