ಸಚಿವರು 11 ವರ್ಷದ ಹಿಂದೆಯೇ  ಪ್ರಮಾಣ ಪತ್ರಗಳನ್ನು ಕಳೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಮುಂದುವರಿಸಲು ದೂರುದಾರರು ನೀಡಿರುವ ಸಾಕ್ಷಿಗಳು ಸಾಕಾಗುವುದಿಲ್ಲ'

ನವದೆಹಲಿ(ಅ.18): ನಕಲಿ ಪ್ರಮಾಣ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ದೆಹಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದು, ಸಚಿವರಿಗೆ ಅನಗತ್ಯವಾಗಿ ಕಿರುಕುಳ ನೀಡುವ ಕಾರಣದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಕೋರ್ಟ್ ತಿಳಿಸಿದೆ.

ಸಚಿವರು 11 ವರ್ಷದ ಹಿಂದೆಯೇ ಪ್ರಮಾಣ ಪತ್ರಗಳನ್ನು ಕಳೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಮುಂದುವರಿಸಲು ದೂರುದಾರರು ನೀಡಿರುವ ಸಾಕ್ಷಿಗಳು ಸಾಕಾಗುವುದಿಲ್ಲ' ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ವಿಂದರ್ ಸಿಂಗ್ ತಿಳಿಸಿದ್ದಾರೆ. ಕೋರ್ಟ್ ನೀಡಿರುವ ತೀರ್ಪಿನಿಂದ ಸಚಿವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.

ಅಮೀರ್ ಖಾನ್ ಎಂಬುವವರು ಕಳೆದ ವರ್ಷ ಸಚಿವೆ ಸ್ಮೃತಿ ಹಿರಾನಿ ಅವರು ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ತಮ್ಮ ಅಫಿಡವಿಟ್'ನಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದರು ಎಂದು ಪ್ರಕರಣ ದಾಖಲಿಸಿದ್ದರು.