ನವದೆಹಲಿ[ಅ.02]: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಹೊಸ ಸಂಕಷ್ಟ ಎದುರಾಗಿದೆ.

2014ರ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ತಮ್ಮ ವಿರುದ್ಧ ಬಾಕಿ ಉಳಿದಿದ್ದ ಎರಡು ಕ್ರಿಮಿನಲ್‌ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲು ವಿಫಲವಾಗಿರುವ ಕಾರಣಕ್ಕೆ ಫಡ್ನವೀಸ್‌ ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂಕೋರ್ಟ್‌ ಮಂಗಳವಾರ ತಿಳಿಸಿದೆ. ಇದೇ ವೇಳೆ ನ್ಯಾ

ರಂಜನ್‌ ಗೊಗೋಯ್‌ ಅವರ ನೇತೃತ್ವದ ಪೀಠ, ಫಡ್ನವಿಸ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿದ ಬಾಂಬೆ ಹೈಕೋರ್ಟ್‌ನ ಆದೇಶವನ್ನು ತಳ್ಳಿಹಾಕಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ಆರೋಪಗಳನ್ನು ಹೊರಿಸಿರುವ ಕಾರಣಕ್ಕೆ ಫಡ್ನವೀಸ್‌ ವಿಚಾರಣೆ ಎದುರಿಸಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್‌ ತಿಳಿಸಿತ್ತು.