ಬೆಂಗಳೂರು: ತಮ್ಮ ಹೆಸರಿನಲ್ಲಿ ‘ಫೇಸ್‌ಬುಕ್’ನಲ್ಲಿ ನಕಲಿ ಖಾತೆ ತೆರೆದು ನಾಡುಪ್ರಭು ಕೆಂಪೇಗೌಡರಿಗೆ ಅಪಮಾನ ಆಗುವ ರೀತಿ ಬರೆಯಲಾಗಿದೆ ಎಂದು ಆರೋಪಿಸಿ ನಟ ಗಣೇಶ್ ಪತ್ನಿ ಹಾಗೂ ಬಿಜೆಪಿ ಮುಖಂಡ ರಾದ ಶಿಲ್ಪಾ ಗಣೇಶ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ಕೆಂಪೇಗೌಡರಿ ಗಿಂತ ಸಾಧನೆ ಮಾಡಿದವರು ಅನೇಕರಿದ್ದಾರೆ, ಸಿಲ್ಕ್ ಯೂನಿವರ್ಸಿಗೆ ಕೆಂಪೇಗೌಡರ ಹೆಸರಿಡುವ ಅವಶ್ಯಕತೆ ಇರಲಿಲ್ಲ’ ಎಂಬುದಾಗಿ ಶಿಲ್ಪಾ ಗಣೇಶ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. 

ಇದರಿಂದ ಹಲವಾರು ಮಂದಿ ಶಿಲ್ಪಾ ಗಣೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ನಿಂದಿಸಿದ್ದರು. ಇದು ಗಮನಕ್ಕೆ ಬರುತ್ತಿದ್ದಂತೆ ಶಿಲ್ಪಾ ಗಣೇಶ್ ಅವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

 ನನ್ನ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಸಾಮಾ ಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಖಾತೆ ತೆರೆದು ಈ ರೀತಿ ಸುಳ್ಳು ಪೋಸ್ಟ್ ಮಾಡಿದ್ದಾರೆ. ನನಗೆ ನಾಡುಪ್ರಭು ಕೆಂಪೇ ಗೌಡರ ಬಗ್ಗೆ ಅಭಿಮಾನ, ಗೌರವ ಇದೆ. ನನ್ನ ಹೆಸರಿಗೆ ಕೆಟ್ಟ ಹೆಸರು ತರಲು ಕಿಡಿಗೇಡಿಗಳು ಪೋಸ್ಟ್ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿರುವುದಾಗಿ ಶಿಲ್ಪಾ ಗಣೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.