ಬೆಂಗಳೂರು, [ಸೆ.05]: ಸಾಮಾಜಿಕ ತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಹೆಚ್ಚಾಗಿದೆ. ಈ ನಕಲಿ ಖಾತೆಗಳು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಬೆನ್ನು ಬಿದ್ದಿವೆ.

ನಕಲಿ ಅಕೌಂಟ್‍ನಲ್ಲಿ ಮೂಲಕ ಸುಮಲತಾ ಅಂಬರೀಶ್ ಅವರ 4 ವರ್ಷಗಳ ಹಿಂದಿನ ಹಳೆಯ ವಿಡಿಯೋವನ್ನು ಹಾಕಿ ತೇಜೋವಧೆಗೆ ಯತ್ನಿಸಲಾಗಿತ್ತು. ಈ ಬಗ್ಗೆ ಸುಮಲತಾ ಅಂಬರೀಶ್ ಸೈಬರ್ ಕ್ರೈಂಗೆ ದೂರು ನೀಡಿದ್ದರು.

ಆದರೂ ಮತ್ತೆ ನಕಲಿ 'ಸುಮಲತಾ' ಬಾಲ ಬಿಚ್ಚಿದ್ದಾಳೆ. ಆದ್ರೆ ಈ ಬಾರಿ ಡಿಕೆ ಶಿವಕುಮಾರ್ ಅವರನ್ನು ಟೀಕಿಸಿ ಪೋಸ್ಟ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಪೋಟೋ ಜತೆಗೆ ನ್ಯಾಯದ ಮುಂದೆ ಎಲ್ಲರೂ ಒಂದೇ. ಅವರು ಮಾಡಿದ್ದನ್ನು ಅವರು ಅನುಭವಿಸುತ್ತಾರೆ. ಇದಕ್ಕಾಗಿ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡುವುದು ಸರಿಯಲ್ಲ ಎಂಬ ಸ್ಟೇಟಸ್ ಹಾಕಲಾಗಿದೆ.

ಸಂಸದೆ ಸುಮಲತಾ ವಿರುದ್ಧ ಅವಾಚ್ಯ ಪದ ಬಳಕೆ: ದೂರು ದಾಖಲು

ಈ ಸ್ಟೇಟಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಕೆಲವರು ಇದನ್ನು ಸಂಸದೆ ಸುಮಲತಾ ಅಂಬರೀಶ್ ಅವರೇ ಮಾಡಿದ್ದಾರೆಂದು ನಂಬಿದ್ದಾರೆ, ಅಷ್ಟೇ ಅಲ್ಲದೇ ಅವರಿಗೆ ಹಿಗ್ಗಾಮುಗ್ಗಾ ಬೈದಿದ್ದಾರೆ. 

ಇದು ಸುಮಲತಾ ಗಮನಕ್ಕೆ ಬಂದಿದ್ದು, ಕೂಡಲೇ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ನಕಲಿ ಖಾತೆ ಸೃಷ್ಟಿ ಮಾಡಿ ಸ್ಟೇಟಸ್ ಹಾಕಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಟ್ಟಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.