ಕರಾವಳಿಯ ಜನಪ್ರಿಯ ಕಲೆ ಯಕ್ಷಗಾನ ಪ್ರದರ್ಶನವೊಂದರಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸುವಂತೆ ಅನಾಮಧೇಯ ವ್ಯಕ್ತಿಗಳು ಕರೆ ನೀಡಿರುವ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮಂಗಳೂರು (ಜ.8) : ಕರಾವಳಿಯ ಜನಪ್ರಿಯ ಕಲೆ ಯಕ್ಷಗಾನ ಪ್ರದರ್ಶನವೊಂದರಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸುವಂತೆ ಅನಾಮಧೇಯ ವ್ಯಕ್ತಿಗಳು ಕರೆ ನೀಡಿರುವ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಪ್ರಸಂಗವನ್ನು ಕೂಡಲೇ ನಿಲ್ಲಿಸದಿದ್ದರೆ ಇದರಲ್ಲಿ ಅಭಿನಯಿಸಿದ ಕಲಾವಿದರು ದಾರಿ ಹೆಣವಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಇದೊಂದು ಹಳೆಯ ವಿಡಿಯೋ ಆಗಿದೆ ಎಂದಿದ್ದಾರೆ.