ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಲು ಎಷ್ಟು ಹಣವಿದ್ದರೂ ಸಾಲುತ್ತಿಲ್ಲ. ಹೀಗಾಗಿ ಸ್ವಿಸ್‌ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಹಣವನ್ನು ತಮಗೆ ಕೊಡಿ ಎಂದು ಕೇಂದ್ರದ ನಾಯಕರಲ್ಲಿ ಸಿಎಂ ಕುಮಾರಸ್ವಾಮಿ ಕೋರಿಕೆ ಸಲ್ಲಿಸಿದ್ದಾರೆ.

ಸುಳ್ಳು ಸುದ್ದಿ

ಬೆಂಗಳೂರು : ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಹಣದ ಪ್ರಮಾಣ ಏರಿಕೆಯಾಗಿದೆ ಎಂಬ ಸುದ್ದಿ ತಿಳಿದ ಕೂಡಲೇ ಕುಮಾರಸ್ವಾಮಿ ಅವರು ದೆಹಲಿಗೆ ದೌಡಾಯಿಸಿದ್ದಾರೆ. 

ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಲು ಎಷ್ಟು ಹಣವಿದ್ದರೂ ಸಾಲುತ್ತಿಲ್ಲ. ಹೀಗಾಗಿ ಸ್ವಿಸ್‌ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಹಣವನ್ನು ತಮಗೆ ಕೊಡಿ ಎಂದು ಕೇಂದ್ರದ ನಾಯಕರಲ್ಲಿ ಕೋರಿಕೆ ಸಲ್ಲಿಸಿದ್ದಾರೆ.

ದೆಹಲಿ ಭೇಟಿಯ ಬಳಿಕ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಕಪ್ಪುಹಣವನ್ನು ವಾಪಸ್ ತರುವ ಭರವಸೆ ನೀಡಿದೆ. ಅದರಲ್ಲಿ ರಾಜ್ಯದ ಪಾಲನ್ನಷ್ಟೇ ಕೇಳಿದ್ದೇವೆ. ಆ ಹಣ ಕೈ ಸೇರಿದ ಬಳಿಕ ರೈತರ ಸಾಲ ಮನ್ನಾಕ್ಕೆ ನೀಡಲಾಗುವುದು ಎಂದು ಸುದ್ದಿಗೆ ತಿಳಿಸಿದ್ದಾರೆ