ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ನೀಡಿದೆ.
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ನೀಡಿದೆ. ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಸುವ ರೀತಿಯಲ್ಲೇ, ಚುನಾವಣೆಗೆ ನಿಲ್ಲುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಿಂದಲೇ ಈ ನಿಯಮ ಜಾರಿಯಾಗಲಿದ್ದು, ಈ ಸಂಬಂಧ ಈಗಾಗಲೇ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ ಮೊದಲ ವಾರದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಒಂದು ವೇಳೆ ಪರೀಕ್ಷೆಯಲ್ಲಿ ಫೇಲ್ ಆದರೆ ಚುನಾವಣೆಗೆ ನಿಲ್ಲುವಂತಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳಿಗೆ ನಡುಕ ಶುರುವಾಗಿದ್ದು, ಚುನಾವಣಾ ಪ್ರಚಾರ ಬಿಟ್ಟು ಸಿಇಟಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
![[ಸುಳ್ಳು ಸುದ್ದಿ] ಟಿಕೆಟ್ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗ ಶಾಕ್..! [ಸುಳ್ಳು ಸುದ್ದಿ] ಟಿಕೆಟ್ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗ ಶಾಕ್..!](https://static.asianetnews.com/images/w-1280,h-720,imgid-ca4b1a25-42eb-409f-b4aa-17e1b4e0c0fa,imgname-image.jpg)