ಅಧಿಕಾರಕ್ಕೆ ಬರುವ ಮುನ್ನವೇ ಇಮ್ರಾನ್ ಖಾನ್ ನೀಡಿದ ಆದೇಶವೇನು..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 27, Jul 2018, 2:00 PM IST
Faking News Imran Khan Order To Teach Cricket In Schools
Highlights

ಪಾಕಿಸ್ಥಾನದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ ಇಮ್ರಾನ್ ಖಾನ್ ಪಕ್ಷ ಹೆಚ್ಚು ಬಹುಮತ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ಬೆಂಗಳೂರು :  ಪಾಕಿಸ್ತಾನದಲ್ಲಿ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಮಾಜಿ ಕ್ರಿಕೆಟಿಗರೂ ಆಗಿರುವ ಇಮ್ರಾನ್ ಖಾನ್ ತಮ್ಮ ಕ್ರಿಕೆಟ್ ಪ್ರೇಮ ಪ್ರದರ್ಶಿಸಿದ್ದಾರೆ. 

ಪಾಕಿಸ್ತಾನದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಪಠ್ಯ ಪುಸ್ತಕಗಳನ್ನು ಬದಿಗಿಟ್ಟು ಕ್ರಿಕೆಟ್ ಹೇಳಿಕೊಡುವಂತೆ ಇಮ್ರಾನ್ ಖಾನ್ ಆದೇಶ ಹೊರಡಿಸಿದ್ದಾರೆ. ನಾನು ಕ್ರಿಕೆಟ್ ಆಡಿ ಬೆಳೆದೇ ದೇಶದ ಪ್ರಧಾನಿ ಆಗಿದ್ದೇನೆ. 

ಹೀಗಾಗಿ ಮಕ್ಕಳು ಪಠ್ಯ ಪುಸ್ತಕಗಳನ್ನು ಓದಬೇಕಾದ ಅಗತ್ಯವಿಲ್ಲ. ಅವರಿಗೆ ಕ್ರಿಕೆಟ್ ಕೋಚಿಂಗ್ ಕೊಡಿಸಿ, ಪಾಕಿಸ್ತಾನ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವವರೆಗೂ ಮಕ್ಕಳು ಶಾಲೆಯಲ್ಲಿ ಕ್ರಿಕೆಟ್ ಆಡಲಿ ಎಂದು ಇಮ್ರಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಕೇಳುತ್ತಿದ್ದಂತೆ ಮಕ್ಕಳು ಶಾಲೆಗೆ ಬರುವುದನ್ನೇ ನಿಲ್ಲಿಸಿದ್ದಾರೆ ಎಂದು ಸುಳ್‌ಸುದ್ದಿ ಮೂಲಗಳು ತಿಳಿಸಿವೆ.

ಸುಳ್ಳು ಸುದ್ದಿ

loader