ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕೆ ಫೇಸ್ಬುಕ್ ಮತ್ತು ಟ್ವೀಟರ್ ಖಾತೆಗಳನ್ನು ವ್ಯಾಪಕವಾಗಿ ಬಳಸಿಕೊಳ್ಳುತ್ತಿವೆ.

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕೆ ಫೇಸ್ಬುಕ್ ಮತ್ತು ಟ್ವೀಟರ್ ಖಾತೆಗಳನ್ನು ವ್ಯಾಪಕವಾಗಿ ಬಳಸಿಕೊಳ್ಳುತ್ತಿವೆ. ಹೀಗಾಗಿ ರಾಜ್ಯದ ಎಲ್ಲಾ ಮತದಾರರಿಗೆ ಆಧಾರ್ ಕಡ್ಡಾಯಗೊಳಿಸಿದ ರೀತಿಯಲ್ಲೇ ಫೇಸ್‌ಬುಕ್ ಮತ್ತು ಟ್ವೀಟರ್ ಖಾತೆಗಳನ್ನು ಕಡ್ಡಾಯ ಗೊಳಿಸಬೇಕು ಎಂದು ರಾಜಕೀಯ ಪಕ್ಷಗಳ ಸರ್ವಪಕ್ಷ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಒಂದು ವೇಳೆ ಮತದಾರರು ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯನ್ನು ಹೊಂದಿದ್ದರೆ ಚುನಾವಣಾ ಪ್ರಚಾರ ಮಾಡುವುದು ಸುಲಭವಾಗಲಿದೆ. ಸಮಾವೇಶಕ್ಕೆ ಜನರನ್ನು ಕರೆತರುವ ಪ್ರಮೇಯ ತಪ್ಪಲಿದೆ ಎಂದು ರಾಜಕೀಯ ಪಕ್ಷಗಳು ಅಭಿಪ್ರಾಯಪಟ್ಟಿವೆ. ಈ ಮಧ್ಯೆ ಹಿಂಬಾಲಕರ ಕೊರತೆಯಿಂದಾಗಿ ಬಿಎಸ್‌ವೈ ಬ್ರೇಕಿಂಗ್ ನ್ಯೂಸ್ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.