ನವದೆಹಲಿ (ಸೆ.30): ಕಾವೇರಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.ಇಷ್ಟೇ ಅಲ್ಲದೆ ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ವಾದ ಮಂಡನೆಯಿಂದ ಹಿಂದಕ್ಕೆ ಸರಿದಿದ್ದಾರೆ.

ಕರ್ನಾಟಕ ಸರ್ಕಾರ ಪದೇ ಪದೇ ಕೋರ್ಟ್ ಆದೇಶ ಉಲ್ಲಂಘನೆ ಮಾಡುತ್ತಿದೆ, ಹೀಗಾಗಿ ನಾನು ಕಾವೇರಿ ವಿವಾದದ ವಾದ ಮಂಡನೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸುಪ್ರೀಂ ಕೋರ್ಟ್'ಗೆ ನಾರಿಮನ್ ಹೇಳಿದ್ದಾರೆ.

ಈ ವಿಚಾರವಾಗಿ ನಾನು ನಿನ್ನೆಯೇ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರವನ್ನು ಬರೆದಿದ್ದೇನೆ ಎಂಬುವುದಾಗಿಯೂ ನಾರಿಮನ್ ತಿಳಿಸಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ತನ್ನನ್ನೇ ಅವಲಂಭಿಸಿದ್ದ ಕರ್ನಾಟಕವನ್ನು ನಾರಿಮನ್ ನಡು ನೀರಿನಲ್ಲಿ ಬಿಟ್ಟಂತಾಗಿದೆ.